ಬೆಂಗಳೂರು : ಪ್ರವಾಸಿಗರ ಸೋಗಿನಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ, ದೇವಸ್ಥಾನಕ್ಕೆ ಬರೋ ಭಕ್ತರ ಚಿನ್ನಾಭರಣ, ಹಣ ಕಳವು ಮಾಡುತ್ತಿದ್ದ ಮಹಿಳೆಯೊಬ್ಬಳನ್ನುಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆ ಆಂಧ್ರದ ಮೂಲದವಳು ಎಂದು ಗುರುತಿಸಲಾಗಿದೆ.
ಆಂಧ್ರಪ್ರದೇಶ ಮೂಲದ ಮಹಿಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು, ಭಕ್ತರನ್ನು ಟಾರ್ಗೇಟ್ ಮಾಡುತ್ತಿದ್ದಳು, ದೇವರೇ ಕಾಪಾಡು ಎಂದು ಬಂದವರು ಚಿನ್ನಾಭರಣ ಕಳೆದುಕೊಂಡು ಹಿಂತಿರುಗುತ್ತಿದ್ದರು. ಈ ನಡುವೆ ಬೆಂಗಳೂರು ಯಶವಂತಪುರ ಪೊಲೀಸರಿಗೆ ಮಹಿಳೆಯೊಬ್ಬಳು ಚಿನ್ನಾಭರಣ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಳೆ ಅನ್ನುವ ಮಾಹಿತಿ ಸಿಕ್ಕಿದೆ. ಇದೇ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತಳಿಂದ 20.2 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ, ಈಕೆಗೆ ಸಹಚರನೊಬ್ಬನಿದ್ದು, ಆತನ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಅಂದಿದ್ದಾರೆ.
Discussion about this post