ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ಸೋಮವಾರ CRPF ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 4 ಮಂದಿ ಸಿಬ್ಬಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ರಾಯ್‌ಪುರದಿಂದ ಅಂದಾಜು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ CRPF ನ 50ನೇ ಬೆಟಾಲಿಯನ್ ಶಿಬಿರದಲ್ಲಿ ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಘಟನೆ ಕುರಿತಂತೆ ಮಾಹಿತಿ ನೀಡಿರುವ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ, ಯೋಧನೊಬ್ಬ ತನ್ನ AK-47 ರೈಫಲ್‌ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ದಾಳಿಗೆ ನಿಖರ ಕಾರಣ ತಿಳಿಯಲು ವಿಚಾರಣೆ ನಡೆಸುತ್ತಿದ್ದಾರೆ ಅಂದಿದ್ದಾರೆ.
ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Discussion about this post