Tuesday, March 9, 2021

ತಾ.13-02-2021 ರ ಶನಿವಾರದ ರಾಶಿಭವಿಷ್ಯ

Must read

- Advertisement -
- Advertisement -


ಮೇಷ
ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು.
ಶುಭ ಸಂಖ್ಯೆ : 8

ವೃಷಭ
ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು.
ಶುಭ ಸಂಖ್ಯೆ : 6

ಮಿಥುನ
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು.
ಶುಭ ಸಂಖ್ಯೆ : 1

ಕರ್ಕ
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಶುಭ ಸಂಖ್ಯೆ :4

ಸಿಂಹ
ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
ಶುಭ ಸಂಖ್ಯೆ : 3

ಕನ್ಯಾ
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಶುಭ ಸಂಖ್ಯೆ : 9

ತುಲಾ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
ಶುಭ ಸಂಖ್ಯೆ : 5

ವೃಶ್ಚಿಕ
ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು.
ಶುಭ ಸಂಖ್ಯೆ : 6

ಧನು
ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು.
ಶುಭ ಸಂಖ್ಯೆ : 1

ಮಕರ
ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.
ಶುಭ ಸಂಖ್ಯೆ : 2

ಕುಂಭ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು.
ಶುಭ ಸಂಖ್ಯೆ : 3

ಮೀನ
ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.
ಶುಭ ಸಂಖ್ಯೆ : 7

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

- Advertisement -
- Advertisement -
- Advertisement -

Latest article