Wednesday, March 3, 2021

ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ : ತಾ.28-01-2021 ರ ಪೂರ್ಣಿಮಾ, ಗುರುವಾರದ ರಾಶಿಭವಿಷ್ಯ

Must read


ಮೇಷ
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
ಶುಭ ಸಂಖ್ಯೆ : 9

ವೃಷಭ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ
ಶುಭ ಸಂಖ್ಯೆ : 3

ಮಿಥುನ
ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು.
ಶುಭ ಸಂಖ್ಯೆ : 1

ಕರ್ಕ
ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ : 2

ಸಿಂಹ
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು.
ಶುಭ ಸಂಖ್ಯೆ : 6

ಕನ್ಯಾ
ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು.
ಶುಭ ಸಂಖ್ಯೆ : 5

ತುಲಾ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
ಶುಭ ಸಂಖ್ಯೆ : 8

ವೃಶ್ಚಿಕ
ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.
ಶುಭ ಸಂಖ್ಯೆ : 4

ಧನು
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು.
ಶುಭ ಸಂಖ್ಯೆ : 7

ಮಕರ
ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ.
ಶುಭ ಸಂಖ್ಯೆ : 1

ಕುಂಭ
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
ಶುಭ ಸಂಖ್ಯೆ : 9

ಮೀನ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು
ಶುಭ ಸಂಖ್ಯೆ : 3
ಶುಭಂಭವತು

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

- Advertisement -
- Advertisement -

Latest article