Thursday, January 21, 2021

ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕ ತಾ.08-01-2021 ಶುಕ್ರವಾರದ ರಾಶಿಭವಿಷ್ಯ

Must read

ಮೇಷ

ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು.

ಶುಭ ಸಂಖ್ಯೆ : 8

ವೃಷಭ

ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.

ಶುಭ ಸಂಖ್ಯೆ : 5

ಮಿಥುನ

ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ.

ಶುಭ ಸಂಖ್ಯೆ : 6

ಕರ್ಕ

ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು.

ಶುಭ ಸಂಖ್ಯೆ :  7

ಸಿಂಹ

ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು

ಶುಭ ಸಂಖ್ಯೆ :  3

ಕನ್ಯಾ

ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ಶುಭ ಸಂಖ್ಯೆ :  2

ತುಲಾ

ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.

ಶುಭ ಸಂಖ್ಯೆ :  6

ವೃಶ್ಚಿಕ

ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.

ಶುಭ ಸಂಖ್ಯೆ :  4

ಧನು

ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು

ಶುಭ ಸಂಖ್ಯೆ :  9

ಮಕರ

ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು.

ಶುಭ ಸಂಖ್ಯೆ :  5

ಕುಂಭ

ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು.

ಶುಭ ಸಂಖ್ಯೆ :  1

ಮೀನ

ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.

ಶುಭ ಸಂಖ್ಯೆ :  7

ಶುಭಂ

#ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ

9972848937

- Advertisement -
- Advertisement -

Latest article