ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.ಪಾಸಿಟಿವಿಟಿ ರೇಟ್ ಕಡಿಮೆಯಾಗದ ಕಾರಣದಿಂದ ದಕ್ಷಿಣ ಕನ್ನಡಕ್ಕೆ ಅನ್ ಲಾಕ್ ಭಾಗ್ಯವೂ ಸಿಕ್ಕಿಲ್ಲ.
ಈ ನಡುವೆ ದಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಲಾಕ್ ಡೌನ್ ನಿಯಮ ಸಡಿಲಿಸಿ ಆದೇಶ ಹೊರಡಿಸಿದ್ದಾರೆ. ಆದೇಶ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಈ ಆದೇಶ ಜುಲೈ 5ರ ಸಂಜೆಯವರೆಗೂ ಜಾರಿಯಲ್ಲಿರುತ್ತದೆ.
ಅಗತ್ಯವಸ್ತುಗಳ ಪಟ್ಟಿಯಲ್ಲಿ ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿ ಬದಿ ವ್ಯಾಪಾರ ಹಾಗೂ ಮದ್ಯ ಪಾರ್ಸೆಲ್ ಗೆ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ.
ಇನ್ನು ಜಿಲ್ಲೆಯಾದ್ಯಂತ ರಾತ್ರಿ.7ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆ. 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬಸ್ ಸಂಚಾರಕ್ಕೂ ಅನುಮತಿ ನಿರಾಕರಿಸಲಾಗಿದ್ದು, ಅಟೋ ರಿಕ್ಷಾ ಮತ್ತು ಟ್ಯಾಕ್ಸಿಯಲ್ಲಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು.
ಇನ್ನು ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
Discussion about this post