ದಾವಣಗೆರೆ : ರಾತ್ರಿ ಊಟ ಸೇವಿಸಿದ ಬಳಿಕ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಊಟ ಸೇವಿಸಿದ ಬಳಿಕ ವಾಂತಿ ಮಾಡಲಾರಂಭಿಸಿದ್ದಾರೆ. ಹೀಗಾಗಿ ತಕ್ಷಣ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿನಿಂದ ಹೊನ್ನಾಳಿಗೆ ದೌಡಾಯಿಸಿದ ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಫುಡ್ ಪಾಯ್ಸನ್ ನಿಂದ ಈ ರೀತಿಯಾಗಿದೆ ಅನ್ನಲಾಗಿದ್ದು, ಖಚಿತ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
Discussion about this post