ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಿಸಿಟಿವಿ ಹೆಚ್ಚಳ
ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಹೆಚ್ವಿಸುವ ನಿಟ್ಟಿನಲ್ಲಿ ಸಿಸಿ.ಟಿ.ವಿ ಕಣ್ಗಾವಲು ಹೆಚ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ನಾಗರೀಕ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ೫೦೦ ಕ್ಕಿಂತಲೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ನಗರಕ್ಕೆ ಪ್ರವೇಶಿಸುವ ಎಲ್ಲಾ ಮಾರ್ಗ ಮತ್ತು ವೃತ್ತ, ಸಂಪರ್ಕ ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಿಸಿಟಿವಿ ಹೆಚ್ಚಳ ಮಾಡುವ ಮೂಲಕ ಕಿಡಿಗೇಡಿಗಳ ಪತ್ತೆಗೆ ಹೆಚ್ಚಿನ ನಿಗಾವಹಿಸಲಾಗುತ್ತದೆ ಎಂದು ಹೇಳಿದರು.