ದಾವಣಗೆರೆ : ಸಿಲಿಂಡರ್ ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.
ತುಂಬಿದ ಸಿಲಿಂಡರ್ ಗೆ ಕನೆಕ್ಷನ್ ಕೊಡೋ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದ ವೀಣಾ ಹಾಗೂ ಅವರ ಇಬ್ಬರು ಮಕ್ಕಳು ಮನೆಯಿಂದ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಮನೆ ಸಂಪೂರ್ಣವಾಗಿ ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಿಲಿಂಡರ್ ನಲ್ಲಿ ಲಿಕೇಜ್ ಇದ್ದ ಪರಿಣಾಮ ಗ್ಯಾಸ್ ಸೋರಿಕೆಯಾಗಿದ್ದು, ಕನೆಕ್ಷನ್ ಕೊಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
Discussion about this post