ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರ ಸೂಚನೆ ಅದೆಷ್ಟು ಕಟ್ಟು ನಿಟ್ಟಾಗಿ ಜಾರಿಯಾಗಲಿದೆ..?
ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮತ್ತು ವ್ಯವಸ್ಥೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಮಾತನಾಡಿದರು. ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.
ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ. ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ, ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮವಹಿಸಿ ಎಂದರು.
ಒಂದು ವೇಳೆ ನಗರ ಪ್ರದೇಶಗಳಲ್ಲಿ ಕರುಳು ಬೇನೆ, ವಾಂತಿ, ಬೇದಿ ಪ್ರಕರಣಗಳು ಕಂಡು ಬಂದರೆ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳು ಆ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ವಹಿಸಬೇಕು. ತಾಲೂಕಿನ ಆಸ್ಪತ್ರೆ ಹಾಗೂ ಕ್ಲಿನಿಕ್ಗಳಲ್ಲಿ ಕರುಳು ಬೇನೆ ಪ್ರಕರಣಗಳು ಬಂದರೆ ಮಾಹಿತಿ ನೀಡುವಂತೆ ಹಾಗೂ ಆ ಸಂಬಂಧ ಅಗತ್ಯ ಕ್ರಮವಹಿಸಲು ಮುಂದಾಗಬೇಕು” ಎಂದು ಅವರು ತಿಳಿಸಿದರು.
ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ಅಥವಾ ಚರಂಡಿ ನೀರು ನಿಲ್ಲದಂತೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕೈಗೊಂಡು ನೀರಿನ ಮೂಲದ ಸುತ್ತ ಕಾಂಕ್ರೀಟ್ ಕಟ್ಟೆ ಕಟ್ಟಲು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಸ್ವಚ್ಛ ನೀರು, ಸ್ವಚ್ಛ ವಾತಾವರಣ ನೀಡುವುದು ಅಧಿಕಾರಿಗಳ ಜವಾಬ್ದಾರಿ. ಸಾರ್ವಜನಿಕ ಸ್ಥಳಗಳಲ್ಲಿ ವೆಟ್ ವೇಸ್ಟ್ ಹಾಕದಂತೆ ಗಮನಹರಿಸಿ. ಗ್ರಾಮಗಳಲ್ಲಿ ಶುಚಿತ್ವದ ಅರಿವು ಮೂಡಿಸುವಂತೆ ಸೂಚಿಸಿದರು.
The Deputy Commissioner K.V. Rajendra on Saturday instructed the officials to subject raw water to testing before public distribution as a precautionary measure against outbreak of any water-borne diseases.
Discussion about this post