ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇದೀಗ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿರುವ ಸೇತುವೆಗಳ ಸುರಕ್ಷತೆ ಕುರಿತು ವರದಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶೋಕಾಸ್ ನೋಟೀಸ್ ಜಾರಿ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿರುವ ಸೇತುವೆಗಳ ಸುರಕ್ಷತೆ ಬಗ್ಗೆ ವರದಿ ನೀಡಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿತ್ತು.
ಆದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯು ಸಮರ್ಪಕವಾದ ವರದಿ ಸಲ್ಲಿಸಿರುವುದಿಲ್ಲ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಹೆದ್ದಾರಿಗಳ ಸುರಕ್ಷತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲಾಗದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangaluru: Deputy Commissioner Mullai Muhilan issued show-cause notices to the officials of the National Highways Authority of India (NHAI) and the Public Works Department (PWD) for their negligence in submitting reports on the safety of bridges on highways