ಕುಸಿದು ಬಿದ್ದ ಅವಶೇಷಗಳಿಂದ ೧೩ ಮಂದಿಯ ರಕ್ಷಣೆ
ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ. ನಿನ್ನೆ ಸಂಜೆ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಶೇಷಗಳಿಂದ ೧೩ ಮಂದಿಯನ್ನು ರಕ್ಷಿಸಲಾಗಿದೆ.
ಮೃತರನ್ನು ಬಿಹಾರದಿಂದ ವಲಸೆ ಬಂದ ಕಾರ್ಮಿಕರಾದ ಅಮ್ರಾನ್, ತ್ರಿಪಾಲ್, ಶಾಹಿಲ್ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದ ಮುನಿರಾಜು ಕಟ್ಟಡದ ಮಾಲೀಕನಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಜನರನ್ನು ರಕ್ಷಿಸಲಾಗಿದ್ದು, ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.