ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಾಗೂ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಅಸಮಾಧಾನಗೊಂಡ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ, ಕಾರ್ಯಕ್ರಮದ ವೇದಿಕೆ ಮೇಲೆ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ ನಡೆದಿದೆ.
ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ನನಗೆ ಮಾಹಿತಿ ಕೊಟ್ಟಿಲ್ಲ, ಸರಿಯಾದ ವ್ಯವಸ್ಥೆ ಮಾಡಿಲ್ಲ. ಮಾಧ್ಯಮದವರ ಆಹ್ವಾನಿಸಿಲ್ಲವೇಕೆ? ಎಂದು ತರಾಟೆ ತೆಗೆದುಕೊಂಡರು.
ಇಷ್ಟಕ್ಕೆ ಸುಮ್ಮನಾಗದ ಸಚಿವರು ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನು ಕರೆದು ತರಾಟೆಗೆ ತಗೆದುಕೊಂಡರು. ಈ ಎಲ್ಲವನ್ನೂ ನೋಡುತ್ತಾ ಕುಳಿತಿದ್ದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮೌನಕ್ಕೆ ಶರಣಾಗಿದ್ದರು.
Discussion about this post