ಮೇಷ
ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವವು.
6
ವೃಷಭ
ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
1
ಮಿಥುನ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
9
ಕರ್ಕ
ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು.
5
ಸಿಂಹ
ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು.
7
ಕನ್ಯಾ
ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ.
3
ತುಲಾ
ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.
2
ವೃಶ್ಚಿಕ
ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.
7
ಧನು
ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ.
8
ಮಕರ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ.
4
ಕುಂಭ
ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.
1
ಮೀನ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
6
ಡಾ.ಬಸವರಾಜ್ ಗುರೂಜಿವೈದಿಕ ಜ್ಯೋತಿಷಿ
9972848937
Discussion about this post