ಜಿಲ್ಲಾ ಎಸ್ಪಿ ಡಾ.ಅನೂಪ್ ಎ. ಶೆಟ್ಟಿಗೆ ನಮ್ಮ ಜಿಲ್ಲೆಯ ಶಕ್ತಿ ಗೊತ್ತಿಲ್ಲ. ಆತ ಹೊಸದಾಗಿ ಜಿಲ್ಲೆಗೆ ಬಂದಿದ್ದಾನೆ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಕಾನೂನು ಪ್ರಕಾರ ಕೈಗೊಂಡ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಡಿಕೆಶಿ, ನನ್ನ ಬೆಂಬಲಿಗರನ್ನು ಸುಳ್ಳು ಕೇಸು ದಾಖಲಿಸಿ ಜೈಲಿಗೆ ಅಟ್ಟಲಾಗಿದೆ ಎಂದು ದೂರಿದ್ದಾರೆ.
ಇನ್ನು ಮಾಜಿ ಸಚಿವ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ್, ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಯದಲ್ಲಿದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದರೂ ಅದನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಡಿಕೆಶಿ ಬೆಂಬಲಿಗರು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರಿಗೆ ರಕ್ಷಣೆ ನೀಡುತ್ತೇವೆ ಎಂದಿದ್ದಾರೆ.
ಒಟ್ಟಿನಲ್ಲಿ ಇಷ್ಟು ದಿನಗಳ ಡಿಕೆಶಿಯನ್ನು ರಾಜಕೀಯವಾಗಿ ಎದುರಿಸಬಲ್ಲ ನಾಯಕ ಬಿಜೆಪಿಯಲ್ಲಿ ಇರಲಿಲ್ಲ. ಡಾ. ಅಶ್ವಥ್ ನಾರಾಯಣ ಇದೀಗ ಡಿಕೆಶಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಬಲ ತುಂಬಿದ್ದಾರೆ.
Discussion about this post