ಡಿಕೆ ಶಿವಕುಮಾರ್ ಲೋಕಾಯುಕ್ತ ಹೇಳಿಕೆ ಹಿಂದಿನ ರಹಸ್ಯವೇನು
ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಿಬಿಐನಿಂದ ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಗೊಂಡ ಬಳಿಕ ಇದೇ ಮೊದಲ ಬಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಪೊಲೀಸರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
75 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಸಂಪಾದನೆ ಮಾಡಿರುವ ಆರೋಪ ಸಂಬಂಧ ಡಿಕೆಶಿ ವಿರುದ್ಧದ ಸಿಬಿಐ ತನಿಖೆಯನ್ನು ರದ್ದು ಮಾಡಿದ್ದ ರಾಜ್ಯ ಸರ್ಕಾರ ಅದನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು.
ಈ ಹಿಂದೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಡಿಕೆಶಿಗೆ ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಂಪುಟ ಸಭೆ ಮುಗಿದ ಬಳಿಕ ತನಿಖಾಧಿಕಾರಿ Dysp ಎಂ.ಎಚ್. ಸತೀಶ್ ಮುಂದೆ ಹಾಜರಾದರು.
ವಿಚಾರಣೆ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಒದಗಿಸುವಂತೆ ಡಿಕೆಶಿಯವರಿಗೆ ಅಧಿಕಾರಿಗಳು ಸೂಚಿಸಿದ್ದಾರೆ ಅನ್ನಲಾಗಿದೆ. ದಾಖಲೆಗಳನ್ನು ಒದಗಿಸಿದ ಬಳಿಕ ಮತ್ತೆ ಮುಂದಿನ ವಿಚಾರಣೆಗೆ ಕರೆಯಲು ಲೋಕಾಯುಕ್ತ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಪ್ರಕರಣದ ಹಿನ್ನಲೆ
ಗುಜರಾತ್ ನಲ್ಲಿ ರಾಜಕೀಯ ಬಿಕ್ಕಟ್ಟು ಹಿನ್ನಲೆಯಲ್ಲಿ ಅಲ್ಲಿನ 42 ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನ ಬಿಡದಿ ಸಮೀಪ ದಲ್ಲಿರೋ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿಯಲು ಡಿಕೆಶಿ ವ್ಯವಸ್ಥೆ ಮಾಡಿದ್ದರು.
ಈ ವೇಳೆ ಐಟಿ ಅಧಿಕಾರಿಗಳು ಡಿಕೆಶಿ ಮತ್ತು ಅವರ ಆಪ್ತರಿಗೆ ಸೇರಿದ 39 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು. ಆಗ ದೆಹಲಿಯಲ್ಲಿ ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು. ಹೀಗಾಗಿ ಇಡಿ ಈ ಪ್ರಕರಣದಲ್ಲಿ ಎಂಟ್ರಿ ಕೊಟ್ಟಿತ್ತು. ಜೊತೆಗೆ ಡಿಕೆಶಿಯವರನ್ನು ಬಂಧಿಸಿತ್ತು ಕೂಡಾ. ನಂತರ ಜಾಮೀನನ ಮೇಲೆ ಡಿಕೆಶಿ ಬಿಡುಗಡೆಯಾಗಿದ್ದರು.
ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆದು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು.
ಈ ನಡುವೆ ಲೋಕಾಯುಕ್ತ ವಿಚಾರಣೆ ಮುಗಿಸಿ ಹೊರ ಬಂದ ಡಿಕೆ ಶಿವಕುಮಾರ್, ಲೋಕಾಯುಕ್ತ ಪೊಲೀಸರಿಗಿಂತ ಸಿಬಿಐನವರೇ ವಾಸಿ, ಲೋಕಾಯುಕ್ತ ಪೊಲೀಸರು 6 ವಾರಗಳಿಂದ ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರು ವಿಚಿತ್ರ ಪ್ರಶ್ನೆ ಕೇಳುತ್ತಿದ್ದಾರೆ. ಸಿಬಿಐನವರು ಒಂದೇ ಒಂದು ಪ್ರಶ್ನೆ ಕೇಳಲಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ ಅಂದಿದ್ದಾರೆ.
ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
Deputy Chief Minister and Bengaluru Development Minister D.K. Shivakumar appeared before the Lokayukta Police for questioning in the Disproportionate Assets case against him, on Thursday, August 22.
This is the first time Mr. Shivakumar appeared before the Lokayukta Police in connection with the case against him. Speaking to reporters after a two-hour interrogation, Mr. Shivakumar said: “Despite the State government transferring the case from the CBI to Lokayukta, the CBI has persisted in its probe, subjecting my close associates and family to undue pressure.