ಫ್ಲೋರೈಡ್ ಸೇರಿದಂತೆ ಅಪಾಯಕಾರಿ ರಾಸಾಯನಿಕ ಯುಕ್ತ ನೀರು ಪೂರೈಕೆ
ಫ್ಲೋರೈಡ್ ಸೇರಿದಂತೆ ಅಪಾಯಕಾರಿ ರಾಸಾಯನಿಕ ಯುಕ್ತ ನೀರನ್ನು ಜನವಸತಿಗಳಿಗೆ ಪೂರೈಸದಂತೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೊನ್ನಾಳಿ ತಾಲೂಕಿನ ಕತ್ತಿಗೆ ಮತ್ತು ಕೂಲಂಬಿ ಗ್ರಾಮಗಳಲ್ಲಿ ಎಸ್ಡಿಪಿ ಯೋಜನೆಯಡಿ ೩ ಕೋಟಿ ರೂಪಾಯಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಪತ್ತೆಯಾದರೆ ಅಲ್ಲಿ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಜೂರು ಮಾಡಲಾಗುವುದು.
ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಯೋಜನೆ ರೂಪಿಸಲಾಗಿದೆ. ಶಾಸಕರ ಅನುದಾನದಲ್ಲಿ ೧ ಕೊಠಡಿ, ಸಂಸದರ ಅನುದಾನದಲ್ಲಿ ೧ ಕೊಠಡಿ ನಿರ್ಮಿಸಲಾಗುವುದು ಎಂದರು.