ಮೇಷ
ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವುವು.
ವೃಷಭ
ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು.
ಮಿಥುನ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.
ಕರ್ಕ
ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು.
ಸಿಂಹ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವುವು. ಋಣಪರಿಹಾರವಾಗುವುದು.
ಕನ್ಯಾ
ವ್ಯವಹಾರಿಕ ಅಭಿವೃದ್ಧಿ ಇರುವದು. ನಿಂತ ಕೆಲಸಗಳು ಮುಂದುವರೆಯುವುವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವದು. ಹಾನಿಯ ಪ್ರಮಾಣ ಕಡಿಮೆಯಾಗುವುದು.
ತುಲಾ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ವೃಶ್ಚಿಕ
ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು.
ಧನು
ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು.
ಮಕರ
ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು.
ಕುಂಭ
ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ.
ಮೀನ
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು.
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
ಶ್ರೀ ದೀಪಾ ಆರಾಧ್ಯ
ಸಂಖ್ಯಾ ಜ್ಯೋತಿಷಿ
8193719164
Discussion about this post