ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ
ಈ ಬಾರಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನಿಸಿದ್ದು, ಈ ಸಂಬಂಧ ೧೯ ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ದಸರಾ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಿತಿಯ ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸುವಂತೆ ಸೂಚಿಸಿದ್ದಾರೆ.
ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆಧುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.