ನವದೆಹಲಿ : ರೈತರ ಕೃಷಿ ಸೆಟ್ ಗಳಿಗೆ ಮೀಟರ್ ಅಳವಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೆ ಕಾರ್ಯ ಪ್ರಾರಂಭಿಸಿದೆ. ಈ ಸಂಬಂಧ ವಿದ್ಯುತ್ ತಿದ್ದುಪಡಿ ಮಸೂದ್ 2021 ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿದೆ. ಈ ಮಸೂದೆ ಪ್ರಕಾರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಕೆಯಾಗಲಿದ್ದು, 10HP ಪಂಪ್ ಸೆಟ್ ತನಕ ಉಚಿತ ವಿದ್ಯುತ್ ಪಡೆಯುತ್ತಿದ್ದ ರೈತರೂ ಸೇರಿ ಎಲ್ಲರೂ ವಿದ್ಯುತ್ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸಿ ಸಬ್ಸಿಡಿ ಪಡೆಯಬಹುದು.
ಆದರೆ ಈ ಮಸೂದೆ ರೈತರು ಹಾಗೂ ರೈತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.ಈ ಮಸೂದೆ ಜಾರಿಯಾದರೆ ವಿದ್ಯುತ್ ಸರಬರಾಜು ನಿಗಮಗಳು ಖಾಸಗಿ ಕಂಪನಿ ಕೈ ಸೇರುತ್ತದೆ. ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡುತ್ತದೆ. ಮಾತ್ರವಲ್ಲದೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್, ಬೀದಿ ದೀಪ ಹಾಗೂ ನೀರು ಸರಬರಾಜಿಗೆ ನೀಡುತ್ತಿರುವ ಉಚಿತ ವಿದ್ಯುತ್ ಸ್ಛಗಿತಗೊಳ್ಳುತ್ತದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಹೋರಾಟಕ್ಕ ಮುಂದಾಗಿರುವ ರೈತ ಸಂಘಟನೆಗಳು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಆಗಸ್ಟ್ 10 ರಂದು ಹೋರಾಟ ನಡೆಸಲು ತೀರ್ಮಾನಿಸಿದೆ.
ಈ ಬಗ್ಗೆ ಮಾತನಾಡಿರುವ ಕೋಡಿಹಳ್ಳಿ, ಈ ಹಿಂದೆ ಎಸ್.ಎಂ. ಕೃಷ್ಣ ರಾಜ್ಯದ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಲು ಮುಂದಾಗಿತ್ತು. ಆಗ ನಡೆದ ಹೋರಾಟದಿಂದ ಎಚ್ಚೆತ್ತುಕೊಂಡ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು. ಕೇಂದ್ರ ಸರ್ಕಾರ ಈ ತರಲು ಹೊರಟಿರುವ ತಿದ್ದುಪಡಿ, ರೈತರ ಪಾಲಿಗೆ ಮರಣ ಶಾಸನವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಅಂದಿದ್ದಾರೆ.
Discussion about this post