ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದ ಏಕೈಕ ಬಿಎಸ್ಪಿ ಶಾಸಕ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಪಕ್ಷದ ಮುಖಂಡೆ ಮಾಯಾವತಿ ಆದೇಶಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕರ್ನಾಟಕದ ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಪಕ್ಷದ ಹೈಕಮಾಂಡ್‌ನ ಸೂಚನೆ ನೀಡಿತ್ತು. ಆದರೆ ಅದನ್ನು ಬಿಎಸ್ಪಿ ಶಾಸಕ ಎನ್ ಮಹೇಶ್ ಉಲ್ಲಂಘಿಸಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಗೈರುಹಾಜರಾಗಿದ್ದಾರೆ, ಇದನ್ನು ಪಕ್ಷ ತುಂಬಾ ಗಂಭೀರವಾಗಿ ಪರಿಗಣಿಸಿದೆ ಮತ್ತು ಮಹೇಶ್ ಅವರನ್ನು ತಕ್ಷಣದಿಂದ ಪಕ್ಷದಿಂದ ಉಚ್ಛಾಟಿಸಲಾಗಿದೆ ಅಂದಿದ್ದಾರೆ.
ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್ಪಿ ಒಂದು ಸ್ಥಾನವನ್ನು ಗೆದ್ದುಕೊಂಡಿತ್ತು. ಹೀಗಾಗಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿಯೂ ಅವರು ನೇಮಕಗೊಂಡಿದ್ದರು. ಆದರೆ ಮಾಯಾವತಿ ಕಾಂಗ್ರೆಸ್ ಜೊತೆ ಮುನಿಸಿಕೊಂಡ ಕಾರಣದಿಂದ ಮೈತ್ರಿ ಸಂಪುಟದಿಂದ ಹೊರಬರುವಂತೆ ಮಹೇಶ್ ಅವರಿಗೆ ಸೂಚಿಸಲಾಗಿತ್ತು.
ಆ ವೇಳೆ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ದೇವೇಗೌಡರು ಮಾಯಾವತಿ ಮನವೊಲಿಸಿಲ್ಲ ಅನ್ನುವ ನೋವು ಮಹೇಶ್ ಅವರಿಗೆ ಕಾಡಿತ್ತು ಎನ್ನಲಾಗಿದೆ.
Discussion about this post