ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ KRSನಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿರುವುದನ್ನು ಖಂಡಿಸಿ ರೈತ ಮತ್ತು ವಿವಿಧ ಸಂಘಟನೆಗಳು KRSನ ನೀರಾವರಿ ನಿಗಮದ ಇಂಜಿನಿಯರ್ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಕೆಆರ್ ಎಸ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂಬ ಸರ್ಕಾರದ ನಿರ್ಧಾರ ಸರಿಯಲ್ಲ. ಟ್ರಯಲ್ ಬ್ಲಾಸ್ಟ್ ನಿಷೇಧ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲು ಕಾವೇರಿ ಜಲಾನಿಯನ ಪ್ರದೇಶದ ರೈತರು ನಿರ್ಧಾರ ಮಾಡಿದ್ದೇವೆ ಎಂದರು. ರೈತ ಸಂಘದ ಜಿಲ್ಲಾಧ್ಯಕ್ಷ A.L.ಕೆಂಪುಗೌಡ, ನಿರಂತರವಾಗಿ ಟ್ರಯಲ್ ಬ್ಲಾಸ್ಟ್ ಮಾಡುವುದರಿಂದ KRS ಡ್ಯಾಂಗೆ ಅಪಾಯವಾಗಲಿದೆ.
ಆದ್ದರಿಂದ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದರು. ಸ್ಥಳೀಯ ರೈತ ರವೀಂದ್ರ, ಕಾವೇರಿ ನೀರಾವರಿ ನಿಗಮ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಂಡಿದೆ. ಇದು ಸರಿಯಲ್ಲ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
Discussion about this post