ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನ ಪಟಾಕಿ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ತೀವ್ರ ಗಾಯವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕರಪುರಂ ಚೆನ್ನೈನಿಂದ ಸುಮಾರು 262 ಕಿಲೋ ಮೀಟರ್ ದೂರದಲ್ಲಿದೆ.
ಈ ನಡುವೆ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ವೇಳೆ ಚಿತ್ರೀಕರಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ಇದೀಗ ಘಟನೆಯಲ್ಲಿ ಮೃತರ ಪೈಕಿ ಒಬ್ಬರು ಪಟಾಕಿ ಅಂಗಡಿ ಸಮೀಪ ರಸ್ತೆ ಬದಿ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಎಂದು ಗೊತ್ತಾಗಿದೆ. ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳ 2 ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ 25ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.
Massive fire at a fire cracker shops in Kallakuruchi district. Casualties feared and reports say atleast 4 have died so far. pic.twitter.com/R1amJPAZ5T
— Mugilan Chandrakumar (@Mugilan__C) October 26, 2021
Discussion about this post