ಬೆಂಗಳೂರು : ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಸಿದ್ರಾಮಣ್ಣ ಎಂದು ಬಾಯಿ ತುಂಬಾ ಕರೆಯುತ್ತಿದ್ದ ಕುಮಾರಸ್ವಾಮಿ ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಕೆರಳಿ ಕೆಂಡವಾಗಿದ್ದಾರೆ.
ಮತ್ತೆ ಅದೇ ಹಳೆಯ ವೈರತ್ವನ್ನು ಇಬ್ಬರೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಈ ನಡುವೆ ಶುಕ್ರವಾರ ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.
ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ’ ಎಂದು ಎಚ್ಡಿಕೆ, ಸಿದ್ದರಾಮಯ್ಯರಿಗೆ ಕುಟುಕಿದ್ದಾರೆ. ಸಲಹೆ ಮಾಡಿದ್ದಾರೆ.
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗೆ ಅಲ್ಲ, ತಮಗೆ ? 2008ರಲ್ಲಿ ಆಪರೇಷನ್ ಕಮಲದ ಫಲವಾಗಿ ನಡೆದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?’ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಬೇರೆ ಸಿಡಿಸಿದ್ದಾರೆ.
ಇದೇ ಸಿದ್ದರಾಮಯ್ಯವರಿಗೆ ಹಳೆ ಸವಾಲನ್ನು ಮತ್ತೊಮ್ಮೆ ಎಸೆದಿರುವ ಕುಮಾರಸ್ವಾಮಿ ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ಸಿದ್ದರಾಮಯ್ಯ ತೋರಿಸಲಿ ಅಂದಿದ್ದಾರೆ.
Discussion about this post