ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಅನ್ನುವುದು ಮತ್ತೆ ಮತ್ತೆ ಬಹಿರಂಗವಾಗುತ್ತಿದೆ. ಒಂದೆಡೆ ಮೈತ್ರಿ ವಿರುದ್ಧ ನಾಯಕರು ಅಸಮಾಧಾನ ವ್ಯಕ್ತಪಡಿಸಿದರೆ, ಮತ್ತೊಂದು ಕಡೆ ಹಿರಿಯ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಅನ್ನುವ ಟೀಕೆ ಕೇಳಿ ಬರುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಪಕ್ಷದ ನಾಯಕರ ವಿರುದ್ಧ ರೋಷನ್ ಬೇಗ್ ತಿರುಗಿ ಬಿದ್ದಿದ್ದರು. ನಾಯಕರ ವರ್ತನೆಯನ್ನು ಖಂಡಿಸಿ ಬಿಜೆಪಿ ಬಗ್ಗೆ ಒಲವು ವ್ಯಕ್ತಪಡಿಸಿದ್ದರು.
ಇದೀಗ ಮಾಡಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸರದಿ. ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು,ಪಕ್ಷದಲ್ಲಿ ಹೊಸದಾಗಿ ಬಂದಿರುವವರಿಗೆ ಮಣೆ ಹಾಕಲಾಗುತ್ತಿದೆ. ಮೊದಲಿನಿಂದಲೂ ಪಕ್ಷದಲ್ಲಿರುವವರಿಗೆ ಯಾವುದೇ ಮನ್ನಣೆ ಸಿಗುತ್ತಿಲ್ಲ. ನಮ್ಮನ್ನು ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ನಮ್ಮನ್ನು ತುಳಿಯಲು ಪ್ರಯತ್ನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ. ಈ ಕುರಿತು ನಾನು ಈ ಮೊದಲೇ ನನ್ನ ಅಭಿಪ್ರಾಯ ತಿಳಿಸಿದ್ದೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದೇನೆ ಅಂದಿದ್ದಾರೆ.
ಇನ್ನು ಇದಕ್ಕೂ ಮುನ್ನ ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಮಲಿಂಗಾರೆಡ್ಡಿ, ತಮ್ಮಗಾಗುತ್ತಿರುವ ಅನ್ಯಾಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Discussion about this post