ದೆಹಲಿ: ಹಿರಿಯ ಪತ್ರಕರ್ತರಾಗಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಚಂದನ್ ಮಿತ್ರಾ (65) ಬುಧವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಈ ಬಗ್ಗೆ ಅವರ ಪುತ್ರ ಕುಶನ್ ಮಿತ್ರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್ ಮಿತ್ರ, 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ‘ದಿ ಪಯೋನಿರ್’ ಪತ್ರಿಕೆ ಸಂಪಾದಕರಾಗಿದ್ದ ಚಂದನ್ ಮಿತ್ರಾ, ಕಳೆದ ಜೂನ್ನಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು
ಚಂದನ್ಮಿತ್ರಾ ಪಶ್ಚಿಮ ಬಂಗಾಳದ ಹೌರಾಹ್ ಮೂಲದವರಾಗಿದ್ದು, ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು. 2016ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಅವರು ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು. ಆಂಗ್ಲಭಾಷೆ ಮೇಲೆ ಹಿಡಿತ ಸಾಧಿಸಿದ್ದ ಚಂದನ್, ರಾಜಕೀಯ ವರದಿಗಾರಿಕೆಯಲ್ಲಿ ಪಳಗಿದ್ದರು.
Discussion about this post