ಮಂಗಳೂರು : ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಗರದ ಯೇನೆಪೋಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಭಾನುವಾರ ಬೆಳಿಗ್ಗೆ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು.ಈ ವೇಳೆ ದೊಡ್ಡ ಪೆಟ್ಟಾಗಿಲ್ಲ ಎಂದು ನಿರ್ಲಕ್ಷಿಸಿದ್ದ ಅವರ. ಭಾನುವಾರ ಸಂಜೆ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ತೆರಳಿದ್ದರು. ಆಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ಗೊತ್ತಾಗಿತ್ತು.
ಹೀಗಾಗಿ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಈ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ಜನಾರ್ದನ ಪೂಜಾರಿ ತನ್ನ ಆಪ್ತನ ಆರೋಗ್ಯವನ್ನು ವಿಚಾರಿಸಿದ್ದಾರೆ. ಪೂಜಾರಿಯವರು ಕೂಡಾ ವಯೋ ಸಹಜ ಕಾರಣದಿಂದ ಮನೆಯಲ್ಲೇ ಇದ್ದು, ಕೊರೋನಾ ಕಾರಣದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.
ಇಂದು ಆಸ್ಪತ್ರೆ ಬಂದವರೇ ಆಸ್ಕರ್ ಜೊತೆಗಿನ ನಂಟಿನ ಬಗ್ಗೆ ಮಾತನಾಡುತ್ತ ಗದ್ಗದಿತರಾದರು. ಆಸ್ಕರ್ ಆರೋಗ್ಯವಾಗಿ ಬರುತ್ತಾರೆ. ದೇವರು ಅವರಿಗೆ ಸಹಾಯ ಮಾಡ್ತಾರೆ ನಾನು ಕೂಡಾ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಅಂದರು.
Discussion about this post