ಮಂಗಳೂರು : ನಗರದ ಖ್ಯಾತ ಐಸ್ ಕ್ರೀಂ ಬ್ರ್ಯಾಂಡ್ ಐಡಿಯಲ್ ಐಸ್ ಕ್ರೀಂ ಸ್ಥಾಪಕರಾದ ಎಸ್ ಪ್ರಭಾಕರ ಕಾಮತ್ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ ಅವರಿಗೆ 79 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪುತ್ರ ಮುಕುಂದ ಕಾಮತ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅಕ್ಟೋಬರ್ 28ರ ಗುರುವಾರ ರಾತ್ರಿ ಬಿಜೈ ಕಾಪಿಕಾಡ್ ನ 1 ನೇ ಅಡ್ಡರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಸ್ಕೂಟರ್ ಕಾಮತ್ ಅವರಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇದು ಮುಂಜಾನೆ ನಿಧನ ಹೊಂದಿದ್ದಾರೆ.
1975ರಲ್ಲಿ ಐಡಿಯಲ್ ಐಸ್ ಕ್ರೀಂ ಪಾರ್ಲರ್ ಆರಂಭಿಸಿದ್ದು, ಅವರೇ ವಿವಿಧ ನಮೂನೆಯ ಐಸ್ ಕ್ರೀಂ ಮನೆಯಲ್ಲಿ ತಯಾರಿಸಿದ್ದರು. ಸ್ವಂತ ಪ್ರಯೋಗ ಹಾಗೂ ಹಲವು ಆವಿಷ್ಕಾರಗಳಿಂದಾಗಿ ಐಡಿಯಲ್ಸ್ ಮನೆಮಾತಾಗಿದೆ. ಕಾಮತ್ ಅವರನ್ನು ಪ್ರೀತಿಯಿಂದ ಪಬ್ಬಾ ಮಾಮ್ ಎಂದು ಕರೆಯುತ್ತಿದ್ದರು. ಅದೇ ಹೆಸರಿನಲ್ಲಿ ಮಂಗಳೂರಿನಲ್ಲಿ ಐಸ್ ಕ್ರೀಂ ಪಾರ್ಲರ್ ಕೂಡಾ ಕಾರ್ಯಾಚರಿಸುತ್ತಿದೆ.
Discussion about this post