ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮುಖ್ಯ ತರಬೇತುದಾರನ ಹುದ್ದೆಯನ್ನು ತೊರೆಯುವ ಬಗ್ಗೆ ರವಿಶಾಸ್ತ್ರಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಆಟಗಾರ ರವಿಶಾಸ್ತ್ರಿ, ‘ಲಭಿಸಿರುವ ಸ್ವಾಗತವನ್ನು ಮೀರಿ ತಂಗಬಾರದು’ ಎಂದು ಹೇಳಿದ್ದಾರೆ.
ಈ ನಡುವೆ ಹೊಸ ಕೋಚ್ ಹುಡುಕಾಟದ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಬಿಸಿಸಿಐ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡೋ ಸಾಧ್ಯತೆಗಳಿದೆ. ಬಿಸಿಸಿಐ ಹೊಸ ಮುಖ್ಯ ಕೋಚ್ ಸಲುವಾಗಿ ವಿದೇಶದ ಒಂದಿಬ್ಬರು ಆಟಗಾರರನ್ನು ಸಂಪರ್ಕಿಸಿದ್ದು ಅವರು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ರಾಹುಲ್ ದ್ರಾವಿಡ್ ಅವರನ್ನೂ ಕೂಡಾ ಮುಖ್ಯ ಕೋಚ್ ಹುದ್ದೆ ಸಲುವಾಗಿ ಸಂಪರ್ಕಿಸಿತ್ತು, ಬಿಸಿಸಿಐನ ಮೂಲಗಳ ಪ್ರಕಾರ, ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ನಿರ್ದೇಶಕರಾಗಿ ಮುಂದುವರಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರಂತೆ.
ಆದರೆ 2016-17ರ ನಡುವೆ ಒಂದು ವರ್ಷದ ಕಾಲ ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆ ವಹಿಸಿದ್ದರು. ಆದರೆ ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕೋಚ್ ಸ್ಥಾನವನ್ನು ತೊರೆದಿದ್ದರು.
ಇದೀಗ ಸೌರವ್ ಗಂಗೂಲಿ ಮುಂದಾಳತ್ವದ ಬಿಸಿಸಿಐ, ಮಗದೊಮ್ಮೆ ಅನಿಲ್ ಕುಂಬ್ಳೆ ಅವರತ್ತ ಮುಖ ಮಾಡುವ ಸಾಧ್ಯತೆಯಿದೆ. 2016ರಲ್ಲಿ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ), ಕುಂಬ್ಳೆ ಅವರನ್ನು ಕೋಚ್ ಸ್ಥಾನಕ್ಕೆ ಶಿಫಾರಸು ಮಾಡಿತ್ತು.
ಮಾಹಿತಿಗಳ ಪ್ರಕಾರ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ ಎನ್ನಲಾಗಿದೆ.
ಅನಿಲ್ ಕುಂಬ್ಳೆ ಅವರ ಮಾರ್ಗದರ್ಶನ, ಅನಿಲ್ ಕುಂಬ್ಳೆ ಅವರ ನಾಯಕತ್ವ ತಂಡಕ್ಕೆ ಮತ್ತಷ್ಟು ಬಲವನ್ನು ತಂದೊಡ್ಡಲಿದೆ ಎಂದು ಬಿಸಿಸಿಐ ನಂಬಿದೆ.
The Sourav Ganguly-led BCCI may approach Anil Kumble and VVS Laxman for the post of head coach of the Indian team when Ravi Shastri’s tenure comes to an end after the T20 World Cup. Kumble was the head coach for one year in 2016-17 before he resigned after a fallout with the captain, Virat Kohli.
Discussion about this post