ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಲ್ಲಿರುವ ಒಟ್ಟು ಸಕ್ಕರೆ, ಉಪ್ಪು ಹಾಗೂ ಸ್ಯಾಚುರೇಟೆಡ್ ಕೊಬ್ಬಿನ ಪೌಷ್ಠಿಕಾಂಶದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಹಾಗೂ ದೊಡ್ಡ ಗಾತ್ರದಲ್ಲಿ ಪ್ಯಾಕೇಟ್ನ ಮೇಲೆ ಮುದ್ರಿಸುವ ಪ್ರಸ್ತಾಪಕ್ಕೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ – ( FSSI) ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು ೨೦೨೦ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ ೪೪ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.
ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ.
In an official statement, Food Safety and Standards Authority of India (FSSAI) said it has approved “a proposal to display nutritional information regarding total sugar, salt and saturated fat in bold letters and relatively increased font size on labels of packaged food items
Discussion about this post