ಬೆಂಗಳೂರು : ಮಗನನ್ನು ಚಂದನವನಕ್ಕೆ ಪರಿಚಯಿಸಬೇಕು ಅನ್ನುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಕನಸು ನನಸಾಗುವ ಸಮಯ ಬಂದಿದೆ. ಮಗಳ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಿದ್ದ ರೆಡ್ಡಿ, ಇದೀಗ ಮಗನ ಚಿತ್ರದ ಮುಹೂರ್ತವನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದಾರೆ.
ಮಾರ್ಚ್ 4 ರಂದು ಬೆಂಗಳೂರಿನಲ್ಲಿ ಮುಹೂರ್ತ ಸಮಾರಂಭ ನಡೆಯಲಿದ್ದು, ಬಾಹುಬಲಿ ಖ್ಯಾತಿಯ ನಿರ್ದೇಶಕ ರಾಜಮೌಳಿ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರವೊಂದಕ್ಕೆ ರಾಜಮೌಳಿ ಕ್ಲ್ಯಾಪ್ ಮಾಡಲಿದ್ದಾರೆ.

ವಾರಾಹಿ ಪ್ರೊಡಕ್ಷನ್ ಹೌಸ್ ನ ಸಾಯಿ ಕೊರಪಾಠಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮಾಯಾ ಬಜಾರ್ ಖ್ಯಾತಿಯ ರಾಧಾಕೃಷ್ಣ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ಈ ಚಿತ್ರ ಮೂಡಿ ಬರಲಿದ್ದು, ಇನ್ನಷ್ಟೇ ಚಿತ್ರಕ್ಕೆ ಹೆಸರಿಡಬೇಕಾಗಿದೆ.
ಟಾಲಿವುಡ್ ನ ದೇವಿಶ್ರೀ ಪ್ರಸಾದ್ ಚಿತ್ರಕ್ಕೆ ಸಂಗೀತ ನೀಡಲಿದ್ದು, ಬಾಹುಬಲಿ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡಲಿದ್ದಾರೆ.
Discussion about this post