ಗಾಂಧಿ ಭಾರತ ಎನ್ನುವ ದ್ಯೇಯದೊಂದಿಗೆ ಕಾರ್ಯಕ್ರಮ ಆಯೋಜನೆ
ಅಕ್ಟೋಬರ್ 2ರಂದು ಕಡ್ಡಾಯವಾಗಿ ರಾಷ್ಟ ಧ್ವಜ ಹಾರಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಕ್ಟೋಬರ್ 2ರಂದು ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಗೆ 100 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸರ್ಕಾರದಿಂದ್ದ ಬೆಳಗಾವಿಯಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಅಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ತಾಲ್ಲೂಕು ಭಾಗದಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ನಡೆಸುವಂತ್ತೆ ಅಧಿಕಾರಿಗಳಿಗೆ ಸೂಚಿಸಿದರು.
ಗಾಂಧಿ ಭಾರತ ಎನ್ನುವ ದ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ಸರ್ಕಾರ ನಡೆಸಲಿದ್ದು ಕಾರ್ಯಕ್ರಮದ ಭಾಗವಾಗಿ ಸಮಿತಿ ರಚಿಸಲಾಗಿದೆ ಎಂದು ವಿವರಿಸಿದರು.