ಬೆಂಗಳೂರು : ಗಣೇಶೋತ್ಸವ ಆಚರಣೆ ಕುರಿತಂತೆ ರಾಜ್ಯ ಸರ್ಕಾರ ಇನ್ನೂ ಗೊಂದಲದಲ್ಲಿದೆ. ಸ್ಪಷ್ಟ ನಿಲುವನ್ನು ತಳೆಯಲು ಸರ್ಕಾರ ವಿಫಲವಾಗಿದ್ದು, ಹಲವರಿಗೆ ಸಮಸ್ಯೆ ತಂದೊಡ್ಡಿದೆ. ರಾಜ್ಯ ಸರ್ಕಾರ ಈ ಹಿಂದೆ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿತ್ತು. ಆದರೆ ಬಿಬಿಎಂಪಿ ಸೇರಿದಂತೆ ಕೆಲ ಜಿಲ್ಲಾಡಳಿತಗಳು ಇದನ್ನು 3 ದಿನಕ್ಕೆಇಳಿಸಿತ್ತು. ಅದರಲ್ಲೂ ಬೆಂಗಳೂರಿನಲ್ಲಿ ಇಷ್ಟೇ ಎತ್ತರದ ಗಣೇಶ ಇಡಬೇಕು ಸೇರಿದಂತೆ 10 ಹಲವು ಷರತ್ತುಗಳನ್ನು ವಿಧಿಸಿದೆ.
ಇದು ಹಿಂದೂಪರ ಸಂಘಟನೆಗಳ ಆಕ್ರೋಶ ಕಾರಣವಾಗಿದ್ದು, ಇದನ್ನು ಪ್ರತಿಭಟಿಸಿ ಬೆಂಗಳೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಬಿಬಿಎಂಪಿ ಮುಂದೆ ಪ್ರತಿಭಟನೆ ನಡೆಸಿವೆ. ಆಳೆತ್ತರದ ಗಣೇಶನ ಪ್ರತಿಮೆಗಳೊಂದಿಗೆ ಆಗಮಿಸಿದ ಪ್ರತಿಭಟನಕಾರರು, ಬಿಬಿಎಂಪಿ ಆಯುಕ್ತರು ಹಿಂದೂ ವಿರೋಧಿ ಎಂದು ಆರೋಪಿಸಿದರು.
ಮತ್ತೊಂದು ಕಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಾತ್ರ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್, ಸಿಎಂ ಬಳಿ 11 ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೆ. ಇದಕ್ಕೆ ಸಿಎಂ ಸಮ್ಮತಿಸಿದ್ದಾರೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಹಿಂದೂ ಹೆಸರು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಇದೀಗ ಹಿಂದೂ ವಿರೋಧಿ ನೀತಿ ತಳೆದಿದೆ ಅನ್ನುವುದು ಹಿಂದೂ ಸಂಘಟನೆಗಳ ಆರೋಪ
Discussion about this post