ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ ವಿನೇಶ್ ಫೋಗಟ್
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ಮಹಿಳೆಯರ ಫ್ರೀ ಸ್ಟೈಲ್ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ ತಲುಪಿದ ಖುಷಿಯ ಬೆನ್ನಲ್ಲೇ, ನಿಗದಿತ ತೂಕಕ್ಕಿಂತ ಹೆಚ್ಚಿನ ತೂಕ ಹೊಂದರಿಂದ ವಿನೇಶ್ ಒಲಿಂಪಿಕ್ಸ್ನಿಂದ ಅನರ್ಹಗೊಂಡಿದ್ದರು. ಈ ಘಟನೆಯಿಂದ ಇಡೀ ಭಾರತ ಅಘಾತಗೊಂಡಿತ್ತು.
ಇದಾದ ಬಳಿಕ ಹಲವು ಬೆಳವಣಿಗೆಗಳು ನಡೆದಿತ್ತು. ಪಂದ್ಯದ ನಿಯಮದ ಪ್ರಕಾರವೇ ಅನರ್ಹಗೊಂಡಿದ್ದೂ, ರಾಜಕೀಯವನ್ನು ಬೆರಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನೂ ಎಳೆದು ತಂದ ಕೆಲವರು ಚಟ ತೀರಿಸಿಕೊಂಡಿದ್ದರು.
ಇದರ ಬೆನ್ನಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವ ವಿನೇಶ್ ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
“ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್ನಲ್ಲಿ ಬರೆದಿದ್ದಾರೆ.
माँ कुश्ती मेरे से जीत गई मैं हार गई माफ़ करना आपका सपना मेरी हिम्मत सब टूट चुके इससे ज़्यादा ताक़त नहीं रही अब।
— Vinesh Phogat (@Phogat_Vinesh) August 7, 2024
अलविदा कुश्ती 2001-2024 🙏
आप सबकी हमेशा ऋणी रहूँगी माफी 🙏🙏
ಈ ನಡುವೆ ಪ್ಯಾರಿಸ್ ಒಲಿಂಪಿಕ್ಸ್ನ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು Vinesh Phogat ವಿನೇಶ್ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಕ್ಕಾಗಿ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ವಿಚಾರದಲ್ಲಿ ಕೋರ್ಟ್ ಅಂತಿಮ ತೀರ್ಪನ್ನು ಇಂದು ಅಂದ್ರೆ ಆಗಸ್ಟ್ 8ರ ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದ್ರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಬೆಳ್ಳಿ ಪದಕ ನೀಡಬೇಕಾಗುತ್ತದೆ.