ಬೀದರ್ : ಇಂದಲ್ಲ ನಾಳೆ ಹುದ್ದೆ ಖಾಯಂ ಆಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ಕೊಟ್ಟಿದೆ. ಯಾವುದೇ ಕಾರಣಕ್ಕೂ ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ಸಾಧ್ಯವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ.
ಬೀದರ್ ನಲ್ಲಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ ನಾರಾಯಣ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ ರಾಜ್ಯ ಸರ್ಕಾರದ ಮುಂದಿಲ್ಲ ಅಂದಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಹೀಗಾಗಿ ಖಾಯಂ ಸಾಧ್ಯವಿಲ್ಲ ಎಂದು ಸಚಿವರು ಕಾರಣ ಕೂಡಾ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತಂತೆ ಮಾತನಾಡಿರುವ ಸಚಿವರು ಸಂಭಾವನೆ ಹೆಚ್ಚಳ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
The government has decided to continue the services of the guest lectures for the current year, working under the various state-run universities during the previous year.
Discussion about this post