ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ವೆಂಕಟೇಶ್ ಅವರ ಏಕೈಕ ಪುತ್ರ
ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ಕು ಮಂದಿ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಸೇನೆ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ. ನವೆಂಬರ್ 22ರ ಸಂಜೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದ್ದು ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ : ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ
ಕ್ಯಾಪ್ಟನ್ ಎಂವಿ ಪ್ರಾಂಜಲ್ MRPLನ ಡೆಲ್ಲಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಯಾಗಿದ್ದು, MRPLನಲ್ಲಿ ಎಂ.ಡಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ವೆಂಕಟೇಶ್ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಅವರು ಮೇ 31ರಂದು ಸೇವೆಯಿಂದ ನಿವೃತ್ತರಾಗಿದ್ದರು. ತಂದೆಯ ನಿವೃತ್ತಿ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು ಕೂಡಾ. ನಿವೃತ್ತಿ ಬಳಿಕ ವೆಂಕಟೇಶ್ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದು ವರೆಸಲಾಗಿದ್ದು, ಅಡಗಿಕೊಂಡಿರುವ ಇಬ್ಬರು ಉಗ್ರರಿರಾಗಿ ಬಲೆ ಬೀಸಲಾಗಿದೆ.
Discussion about this post