ಉಡುಪಿ : ರಸ್ತೆ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಸಾಲಿಗ್ರಾಮ ಮೀನು ಮಾರುಕಟ್ಟೆಯನ್ನು ತೆರವುಗೊಳಿಸಲಾಗಿತ್ತು.
ಆದರೆ ತೆರವುಗೊಂಡಷ್ಟೇ ವೇಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಾಣವಾಗೋದಿಲ್ಲ. ಇದು ನಮ್ಮ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.
ಸಾಲಿಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಮೀನು ಮಾರುಕಟ್ಟೆ ತೆರವುಗೊಂಡ ಕಾರಣ ಮಹಿಳಾ ಮೀನು ಮಾರಾಟಗಾರರು ಅತಂತ್ರ ಸ್ಥಿತಿಯಲ್ಲಿದ್ದರು.
ಬೇರೆ ಜಾಗದಲ್ಲಿ ಉತ್ತಮ ಮಾರುಕಟ್ಟೆ ನಿರ್ಮಾಣದ ಭರವಸೆಯನ್ನು ನೀಡಲಾಗಿತ್ತಾದರೂ, ಅದು ನಿರ್ಮಾಣವಾಗಲು ಸಾಕಷ್ಟು ಸಮಯ ಬೇಕಾಗಿದೆ.
ಈ ನಡುವೆ ಅತಂತ್ರ ಸ್ಥಿತಿಯಲ್ಲಿದ್ದ ಮಹಿಳಾ ಮೀನು ಮಾರಾಟಗಾರರ ಸಮಸ್ಯೆ ಆಲಿಸಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಇದೀಗ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದಾರೆ. ಅದು ಕೂಡಾ ತನ್ನದೇ ಸ್ವಂತ ಕಾಸಿನಲ್ಲಿ.
ವಿಶೇಷ ಅಂದ್ರೆ ಮೀನು ಮಾರೋ ಮಹಿಳೆಯರ ಮನವಿಗೆ ಸ್ಪಂದಿಸಿದ ತಕ್ಷಣ ದೌಡಾಯಿಸಿದ ಶಾಸಕರು, ಸ್ಥಳಕ್ಕೆ ಗುತ್ತಿಗೆದಾರರನ್ನು ಕರೆಸಿ, ಸ್ಥಳದಲ್ಲೇ ನೀಲ ನಕ್ಷೆ ರಚಿಸಿ, ವಾರದಲ್ಲಿ ಕಾಮಗಾರಿ ಮುಗಿಸುವಂತೆ ಸೂಚಿಸಿದ್ದಾರೆ.
ಕರಾವಳಿಯ ವಾಜಪೇಯಿ ಎಂದೇ ಪ್ರಸಿದ್ಧರಾದ ಹಾಲಾಡಿಯವರ ಈ ಕಾರ್ಯ ಇದೀಗ ಜನಮೆಚ್ಚುಗೆಗೆ ಪಾತ್ರವಾಗಿದೆ.
Discussion about this post