ಸಾರಿಗೆ ಸಂಸ್ಥೆಯ ಬಸ್ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣದ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮಗುಚಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಇನೋವಾ ಕಾರಿಗೂ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್(29) ಮೃತಪಟ್ಟಿದ್ದಾರೆ.
46 ಮಂದಿ ಪ್ರಯಾಣಿಕರನ್ನು ತುಂಬಿಕೊಂಡ ಬಸ್ ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ತೆರಳುತಿತ್ತು. ಈ ವೇಳೆ ಹಿರೀಸಾವೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡಕ್ಕೀಡಾಗಿದೆ.
ಬಸ್ನಲ್ಲಿ 46 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 24 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Discussion about this post