ದೇವಸ್ಥಾನದ ಆವರಣದಲ್ಲೇ ಮಲಗಿ ಎದ್ದು ದೇವಸ್ಥಾನದ ಗೋಡೆಗೆ ಈತ ಮೂತ್ರ ವಿಸರ್ಜನೆ ಮಾಡಿದ್ದನಂತೆ – Haveri Temple
ಹಾವೇರಿ : ತಾಲೂಕಿನ ಕನವಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. (Haveri Temple)ಬಂಧಿತನನ್ನು ಜಾಫರ್ ಕನ್ಯಾನವರ (32) ಎಂದು ಗುರುತಿಸಾಗಿದೆ. ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ಆರೋಪವನ್ನು ಈತನ ಮೇಲೆ ಹೊರಿಸಲಾಗಿತ್ತು.
ಜಾಫರ್ ದೇವಸ್ಥಾನದ ಆವರಣದಲ್ಲೇ ಮಲಗಿದ್ದು, ಬಳಿಕ ಎದ್ದು ದೇವಸ್ಥಾನದ (Haveri Temple)ಗೋಡೆ ಮೂತ್ರ ವಿಸರ್ಜನೆ ಮಾಡಿದ ದೃಶ್ಯ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಒಂದಿಷ್ಟು ಗೊಂದಲದ ವಾತಾವಣ ಕೂಡಾ ನಿರ್ಮಾಣವಾಗಿತ್ತು.
ಇದನ್ನೂ ಓದಿ : biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್
ಈ ವೇಳೆ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಜೊತೆಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಇದೀಗ ಜಾಫರ್ ನನ್ನು ವಶಕ್ಕೆ ಪಡೆದಿರುವ ಗುತ್ತಲ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರಪತಿ ಪ್ರಮಾಣ ವಚನ ಸಮಾರಂಭದಲ್ಲಿ ಖರ್ಗೆಗೆ ನೀಡಿದ ಆಸನದ ಬಗ್ಗೆ ಆಕ್ಷೇಪ
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೊಟ್ಟ ಸೀಟು ಬಗ್ಗೆ ತಕರಾರು ಎದ್ದಿದೆ
ನವದೆಹಲಿ : ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ದೇಶದ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಆದರೆ ಇದೀಗ ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಮಾಣ ವಚನ ಸಮಾರಂಭದಲ್ಲಿ ನೀಡಲಾದ ಆಸನದ ಬಗ್ಗೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದ್ದು, ತಮ್ಮ ಆಕ್ರೋಶ ಹೊರ ಹಾಕಿದೆ. ಇನ್ನು ಕಾಂಗ್ರೆಸ್ ಎತ್ತಿರುವ ಆಕ್ಷೇಪಕ್ಕೆ ಇತರ ಪಕ್ಷಗಳು ಕೂಡಾ ದನಿಗೂಡಿಸಿದೆ.
Read More : vijayanand kashappanavar : ಎರಡನೇ ಮದುವೆಯಾದ್ರ ವಿಜಯಾನಂದ ಕಾಶಪ್ಪನವರ : ಮಗುವಿನ ಜನನ ಪ್ರಮಾಣ ಪತ್ರ ವೈರಲ್
ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಲಾದ ಆಸನ ಅವರು ಹೊಂದಿರುವ ಸ್ಥಾನಕ್ಕೆ ಅನುಗುಣವಾಗಿರಲಿಲ್ಲ. ಈ ವಿಚಾರದಲ್ಲಿ ಶಿಷ್ಟಚಾರ ಪಾಲಿಸದಿರುವುದರಿಂದ ನಮಗೆ ಅಘಾತವಾಗಿದೆ. ಈ ವಿಚಾರದಲ್ಲಿ ನಾವು ನಮ್ಮ ಪ್ರತಿಭಟನೆಯನ್ನು ದಾಖಲಿಸುವ ಸಲುವಾಗಿ ಪತ್ರ ಬರೆಯುತ್ತಿದ್ದೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ವರ್ತನೆಯನ್ನು ಖಂಡಿಸಿದ್ದು, ಮಲ್ಲಿಕಾರ್ಜುನ ಖರ್ಗೆಯವರಿಗೆ ಮೊದಲ ಸಾಲಿನಲ್ಲೇ ಆಸನ ನೀಡಲಾಗಿತ್ತು. ಇದೇ ಸಾಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಆಸೀನರಾಗಿದ್ದರು ಎಂದು ಹೇಳಿದ್ದಾರೆ.
Discussion about this post