ಇಂಧನ ದರ ಏರಿಕೆಯಾಗುತ್ತಿರುವುದುನ್ನು ಕಂಡ ಜನ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದರು. ಎಲ್ಲಿದೆ ಅಚ್ಛೇ ದಿನ್ ಎಂದು ಪ್ರತಿಪಕ್ಷಗಳು ಪ್ರಶ್ನಿಸಿತ್ತು.
ಇದಾದ ಕೆಲ ದಿನಗಳಲ್ಲಿ ಇಂಧನ ದರ ಇಳಿಕೆ ಕಾಣಲಾರಂಭಿಸಿತು. ಹೀಗಾಗಿ ಟೀಕಿಸುತ್ತಿದ್ದವರೆಲ್ಲಾ ಸೈಲೆಂಟ್ ಅದ್ರು.
ಕಳೆದ 2 ತಿಂಗಳಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ವಾಹನ ಸವಾರರ ನಿತ್ಯವೂ ಮಂದಹಾಸದಲ್ಲಿದ್ದರು.
ಆದ್ರೆ ಇದೀಗ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 32ಕ್ಕೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದೆ.
ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಶೇ.32 ಮತ್ತು ಡೀಸೆಲ್ ಮೆಲೆ ಶೇ.21 ತೆರಿಗೆ ಹೆಚ್ಚಳಕ್ಕೆ ಸರ್ಕಾರ ಆದೇಶ ಪ್ರಕಟಿಸಿದೆ. ತೆರಿಗೆ ಹೆಚ್ಚಳದಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರ ಒಂದು ರೂ. ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆಯನ್ನು ಏರಿಸುತ್ತಿದ್ದೇವೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ತೆರಿಗೆ ಏರಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.84 ರೂ. ಆಗಿದ್ದರೆ ಡೀಸೆಲ್ ಬೆಲೆ 64.66 ರೂ.ಗೆ ಏರಿಕೆಯಾಗಲಿದೆ.
ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು.
ಸಪ್ಟೆಂಬರ್ ನಲ್ಲಿ ಸಿಎಂ ಕುಮಾರಸ್ವಾಮಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 2ರಷ್ಟು ಇಳಿಕೆ ಮಾಡಿದ್ದರು. ಆದ್ರೆ ಈಗ ಪೆಟ್ರೋಲ್ ಮೇಲಿನ ತೆರಿಗೆ ಶೇಕಡಾ 32 ಹಾಗೂ ಡೀಸೆಲ್ ಮೇಲೆ ಶೇಕಡಾ 21ರಷ್ಟು ತೆರಿಗೆ ಏರಿಕೆ ಮಾಡಿದ್ದಾರೆ.