ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ್ದ ಭೂ ಸುಧಾರಣಾ ಮಸೂದೆಗಿಂತಲೂ ಅತೀ ಹೆಚ್ಚು ಚರ್ಚೆಯಾಗುತ್ತಿರುವುದು ಮಾಜಿ ಸಿಎಂ ಕುಮಾರಸ್ವಾಮಿ ನಡೆ.
ಕಾಯ್ದೆ ವಿರುದ್ಧ ಮಾತನಾಡುತ್ತಿದ್ದ ಜೆಡಿಎಸ್ ನಾಯಕರೆಲ್ಲಾ ಏಕಾಏಕಿಯಾಗಿ ಮಸೂದೆಯನ್ನು ಬೆಂಬಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಕುಮಾರಸ್ವಾಮಿ ನಡೆಯಿಂದ ರೈತ ಸಂಘಟನೆಗಳು ಸಿಡಿದೆದ್ದಿವೆ. ಕುಮಾರಸ್ವಾಮಿ ಮಾತಿನ ಗುಂಡು ಹಾರಿಸಿರುವ ರೈತ ಮುಖಂಡರು ಆರೋಪಗಳ ಸುರಿಮಳೆಗೈದಿದ್ದಾರೆ. ಈ ನಡುವೆ ರೈತ ಮುಖಂಡರ ಅಸಲಿ ಬಣ್ಣವನ್ನೂ ಕುಮಾರಸ್ವಾಮಿ ಕಳಚುವಂತಾಗಿದೆ.
ಇದೀಗ ಕುಮಾರಸ್ವಾಮಿ ನಡೆ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಕುಮಾರಸ್ವಾಮಿ ಬಳಿ ಬೇನಾಮಿ ಜಮೀನಿದ್ದು, ಅದನ್ನು ಉಳಿಸಿಕೊಳ್ಳಲು ಭೂ ಸುಧಾರಣೆ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ರೈತ ಮುಖಂಡರ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಬೇನಾಮಿ ಭೂಮಿ ಮೇಲಿರುವ ಎಲ್ಲ ಪ್ರಕರಣಗಳನ್ನು ಸರ್ಕಾರ ವಜಾ ಮಾಡಿದೆ. ಹೀಗಾಗಿ ಸರ್ಕಾರದ ಪರ ಕುಮಾರಸ್ವಾಮಿ ಇದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿರುವ ಕುಮಾರಸ್ವಾಮಿ ಅವರಿಗೆ ನಾಚಿಕೆಯಾಗಬೇಕು. ತಮ್ಮ ಸ್ವಾರ್ಥಕ್ಕಾಗಿ ಕೃಷಿ ವಿರೋಧಿ ಮಸೂದೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
Discussion about this post