ಅಕ್ರಮ ಆಸ್ತಿ ಆರೋಪದಲ್ಲಿ ಇಡಿ ವಶದಲ್ಲಿರುವ ಮಾಜಿ ಡಿಕೆ ಶಿವಕುಮಾರ್ ಅವರನ್ನು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ವೇಳೆ ಯಾವುದೇ ಕಾರಣಕ್ಕೂ ಡಿಕೆಶಿಗೆ ಜಾಮೀನು ಕೊಡಬಾರದು ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದು, ಅವರು ವಿಚಾರಣೆಗೆ ಸಹಕಾರ ನೀಡಿಲ್ಲ. ಆರೋಪಿಯ ಅನಾರೋಗ್ಯದ ಕಾರಣದಿಂದ ಅವರನ್ನು ಸರಿಯಾಗಿ ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಹೀಗಾಗಿ ಆರೋಪಿ ಡಿಕೆ ಶಿವಕುಮಾರ್ ಅವರ ಲೆಕ್ಕ ಪರಿಶೋಧಕರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ಈ ಕಾರಣದಿಂದ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಇಡಿ ವಕೀಲರು ಮನವಿ ಮಾಡಿದ್ದಾರೆ.
ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡಿ. ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಿಪಿ, ಶುಗರ್ ಅವರನ್ನು ಕಾಡುತ್ತಿದೆ. ಜೊತೆಗೆ ಅವರಿಗೆ ಹೃದಯಾಘಾತ ಸಾಧ್ಯತೆ ಇದೆ. ಹೀಗಾಗಿ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಕೋರಿಕೊಂಡರು.
ಇದೇ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು ಇದು ವೈದ್ಯರು ನೀಡಿದ ಮಾಹಿತಿಯೇ ಎಂದು ಪ್ರಶ್ನಿಸಿದರು. ಇಲ್ಲ ಇದು ನನ್ನದೇ ವಾದ ಎಂದು ಸಿಂಘ್ವ ತಿಳಿಸಿದರು.
ಈ ನಡುವೆ ಕಟಕಟೆಯಲ್ಲಿ ನಿಂತು ಸುಸ್ತಾದ ಡಿಕೆಶಿಯವರಿಗೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ನ್ಯಾಯಾಧೀಶರು ಅನುಮತಿಸಿದ ಘಟನೆಯೂ ನಡೆಯಿತು.
Discussion about this post