ಪುತ್ತೂರು : ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಶ್ರೇಯಾ ( 16) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಗಳ ಎರಡನೇ ಮಗಳಾಗಿರುವ ಶ್ರೇಯಾ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು.
ಸದಾ ಚಟುವಟಿಕೆಯಿಂದ ಇರುತ್ತಿದ್ದಾಕೆಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿತ್ತು.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದ್ರೂ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಶ್ರೇಯಾ ಪ್ರಾಣ ಪಕ್ಷಿ ಹಾರಿ ಹೋಗಿತ್ತು
Discussion about this post