ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ( Heart attack) ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಿದೆ. ಆದರೆ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ
ಶಿವಮೊಗ್ಗ : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆಯೇ ಫೋಟೋಗ್ರಾಫರ್ ಒಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೆಲಿನ ಸೋಮೇಶ್ವರ ದೇವಸ್ಥಾನದಲ್ಲಿ ನಡೆದಿದೆ.( Heart attack)
ಮೃತರನ್ನು ಸಾಗರ ಪಟ್ಟಣದ ರಾಮನಗರದ ಚಂದ್ರು (42) ಎಂದು ಗುರುತಿಸಲಾಗಿದೆ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ಸಾಗರ ಸ್ಥಳೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ಚಂದ್ರು ಸಾಗರದಲ್ಲಿ ಶಿಲ್ಪ ಸ್ಟುಡಿಯೋ ಅನ್ನು ನಡೆಸುತ್ತಿದ್ದರು. ಚಂದ್ರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ( Heart attack)
ಕೆಲ ದಿನಗಳ ಹಿಂದಷ್ಟೇ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ಕಾರು ಚಾಲಕ ಧಾರವಾಡ ಮೂಲದ ರವಿ ಕುಮಾರ್ ಎಸ್. ಕಾಳೆ (46) ಹೃದಯಾಘಾತದಿಂದ ಮೃತಪಟ್ಟಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶನಿವಾರ ಹುಬ್ಬಳ್ಳಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದರು.
ಹೀಗಾಗಿ ರವಿಕುಮಾರ್ ರಾತ್ರಿ ರಾಜ್ಯಪಾಲರನ್ನು ಕರೆತರಲು ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರವಿಕುಮಾರ್ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ದೇವನಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ರವಿಕುಮಾರ್ ಮೃತಪಟ್ಟಿದ್ದರು.
Discussion about this post