ಮಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಅಕ್ಟೋಬರ್ 17ರವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಕರ್ನಾಟಕದ ಕರಾವಳಿ ಹಾಗೂ ಕೇರಳದ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ.
ಹವಮಾನ ಇಲಾಖೆಯ ಪ್ರಕಟಣೆ ಪ್ರಕಾರ ಲಕ್ಷದ್ವೀಪದ ಆಗ್ನೇಯ ಭಾಗ ಮತ್ತು ಬಂಗಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಎಲ್ಲಾ ಲಕ್ಷಣ ಗೋಚರಿಸುತ್ತಿದೆ. ಹೀಗಾಗಿ ಅಕ್ಟೋಬರ್ 17ರವರೆಗೆ ಭಾರೀ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಇದರೊಂದಿಗೆ ಆಂಧ್ರ ಪ್ರದೇಶ ಮತ್ತು ಓಡಿಶಾ ಕರಾವಳಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಹವಮಾನ ಇಲಾಖೆ ಎಚ್ಚರಿಕೆ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ಘೋಷಿಸಿದ್ದು, ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ. ಕೇರಳದ 13 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿಲಾಗಿದ್ದು, 6 NDRF ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದ್ದು, ಇತರ ಇಲಾಖೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
Discussion about this post