ನಿನ್ನೆಗಿಂತ ಇಂದು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಾತ್ರಿಯಿಂದ ಪ್ರಾರಂಭವಾದ ಮಳೆ ಬೆಳಗ್ಗೆಯೂ ಮುಂದುವರಿದಿತ್ತು. ಮಳೆಯ ಅಬ್ಬರ ತೀವ್ರವಾಗಿರುವ ಕಾರಣ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಅನೇಕ ಕಡೆಗಳಲ್ಲಿ ವಾಹನ ಮುಳುಗಡೆಯಾಗಿದೆ.
ಇನ್ನು ಶಾಲೆಗೆ ಬರಲು ತೊಂದರೆಯಾಗುವ ಕಡೆ ರಜೆ ಘೋಷಿಸಲಾಗಿದ್ದು, ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ಮುಂದುವರಿಸಲಾಗಿದೆ. ಇನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಳೆ ಮತ್ತು ಶಾಲೆಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಮಂಗಳೂರಿನ ಹೆದ್ದಾರಿ 73ರ ಪಡೀಲು ಸಮೀಪ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇನ್ನು ನಗರದ ಅನೇಕ ಓವವರ್ ಬ್ರಿಡ್ಸ್ ಕೆಳಗೆ ನೀರು ನಿಂತಿದ್ದು, ಅವೈಜ್ಞಾನಿಕ ಕಾಮಗಾರಿಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ.
ಮಂಗಳೂರು ಮಾತ್ರವಲ್ಲದೆ ಬಂಟ್ವಾಳ, ಸುಳ್ಯ, ಬೆಳ್ತಂಗಡಿ ಮತ್ತು ಪುತ್ತೂರು ತಾಲೂಕಿನಲ್ಲೂ ಮಳೆಯ ಅಬ್ಬರ ತೀವ್ರವಾಗಿದ್ದು, ಕೆಲವು ಕಡೆ ಮರ ಬಿದ್ದು ತೊಂದರೆಯಾಗಿದೆ.
Discussion about this post