ಬೆಂಗಳೂರು : ರಾಜ್ಯದ ವಿವಿಧೆಡೆ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದ ಮಂಗಳವಾರ ಹಲವು ಕಡೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಗಳಿದೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿದ್ದು, 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ನಗರ, ಶಿಕಾರಿಪುರ, ಸಾಗರಗಳಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪ್ರಕರಣ, ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ 6 ಪ್ರಕರಣ, ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ 2 ಪ್ರಕರಣ ಮತ್ತು ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಬನಹಟ್ಟಿ ಪ್ರಕರಣ ಸಂಬಂಧ 15 ಜನರನ್ನು ಬಂಧಿಸಲಾಗಿದ್ದು, ಶಿವಮೊಗ್ಗ ನಗರದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಗಮನಾರ್ಹ ಅಂಶ ಅಂದ್ರೆ ಬಂಧಿತರ ಪೈಕಿ ಯಾರೊಬ್ಬರೂ ವಿದ್ಯಾರ್ಥಿಗಳಿಲ್ಲ.
Discussion about this post