ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ
ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಹಿರಿಯ ಅರಣ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಅರಣ್ಯ, ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿ, ಸಚಿವ ಸಂಪುಟದ ಅನುಮೋದನೆ ಇಲ್ಲದೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈ ಸಂಬಂಧ ನೀಡಿರುವ ಟಿಪ್ಪಣಿಯಲ್ಲಿ ಈ ’ಅರಣ್ಯವನ್ನು ‘ಯಾವತ್ತೂ ಅರಣ್ಯವಲ್ಲ’ ಎಂದು ಘೋಷಿಸಬೇಕಾದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ವಾಗಬೇಕು ಎಂದು ಸ್ಪಷ್ಟವಾಗಿದೆ.
ಇತರ ಸರ್ಕಾರಿ ಇಲಾಖೆಗೆ ಸರ್ಕಾರಿ ಭೂಮಿ ವರ್ಗಾವಣೆ ಮಾಡಬೇಕಾದ ಸಂದರ್ಭದಲ್ಲಿ ಅದರ ಮೌಲ್ಯ ೫ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದಲ್ಲಿ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.
ಆದರೆ ಕೆಲವು ಅಧಿಕಾರಿಗಳು ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಅನುಮತಿಯೂ ಇಲ್ಲದೆ ತಮ್ಮ ಮಟ್ಟದಲ್ಲೇ ಸರ್ಕಾರದ ಆದೇಶ ಮಾಡಿ ಸುಪ್ರೀಂಕೋರ್ಟ್ ಗೆ ಐ.ಎ. ಸಲ್ಲಿಸಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಎಚ್.ಎಂ.ಟಿ. ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರವನ್ನೂ ನೀಡಿದೆ. ಇದರಿಂದಾಗಿ ಎಚ್.ಎಂ.ಟಿ. ಈವರೆಗೆ ೧೬೫ ಎಕರೆ ಜಮೀನನ್ನು, ೩೧೩ ಕೋಟಿ ೬೫ ಲಕ್ಷ ೫೨ ಸಾವಿರದ ೬೮೧ ರೂಪಾಯಿಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿರುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕಾರಣ ಕೇಳಿ ನೋಟಿಸ್ ನೀಡಿ ೭ ದಿನಗಳ ಒಳಗಾಗಿ ಉತ್ತರ ಪಡೆದು, ಮುಂದಿನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
Minister of Forests, Ecology and Environment Eshwara B Khandre has instructed to issue a notice to the senior forest officers who have defied the rules and applied to the Supreme Court to denotify the forest land of HMT area in Peenya-Jalahalli Plantation without the approval of the Minister and the Cabinet.