ಉಡುಪಿ : ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹ ಸಮುಚ್ಚಯ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಸತಿ ಗೃಹ ಸಮುಚ್ಚಯಗಳ ಉದ್ಘಾಟನೆ ನೆರವೇರಿಸಿದರು.
ಇದೇ ವೇಳೆ ಶ್ರೀಕೃಷ್ಣ ಮಠದ ಆವರಣದಲ್ಲಿ ಪೊಲೀಸ್ ಹೊರ ಠಾಣೆ ಆರಂಭಿಸಿ ಅವಶ್ಯಕತೆ ಇರುವ ಸಿಬ್ಬಂದಿ/ಹುದ್ದೆ ಮಂಜೂರು ಮಾಡುವಂತೆ ಹಾಗೂ ಮಣಿಪಾಲದಲ್ಲಿ ಹೊಸ ಅಗ್ನಿಶಾಮಕ ಠಾಣೆ ಆರಂಭಿಸುವ ಬಗ್ಗೆ ಶಾಸಕ ರಘುಪತಿ ಭಟ್ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. , ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎ.ಎನ್.ಎಫ್. ಎಸ್ಪಿ ನಿಖಿಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷರಾದ ಸುಮಿತ್ರ ನಾಯಕ್, ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಪೊಲೀಸ್ ಉಪಾಧೀಕ್ಷಕರಾದ ಸುಧಾಕರ ಎಸ್. ನಾಯ್ಕ ಉಪಸ್ಥಿತರಿದ್ದರು.
ಇದಾದ ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವರು ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಈಶಪ್ರಿಯ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಸಚಿವರು ಭೇಟಿ ನೀಡಿದರು.
The State Home Minister Araga Jnanendra inaugurated the police staff quarters, constructed at a cost of Rs 10 crore at Udupi here, on October 9. The police quarters apartment complex contains 56 two BHK flats.
Discussion about this post