ಮೇಷ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.
7
ವೃಷಭ
ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು.
4
ಮಿಥುನ
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
2
ಕರ್ಕ
ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು.
5
ಸಿಂಹ
ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
8
ಕನ್ಯಾ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು.
3
ತುಲಾ
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು.
6
ವೃಶ್ಚಿಕ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು.
7
ಧನು
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
2
ಮಕರ
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ.
9
ಕುಂಭ
ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .
6
ಮೀನ
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
3
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
Discussion about this post